ತುಮಕೂರು: ಪ್ರತಿಯೊಬ್ಬರೂ ಸಹ ಕೊರೊನಾ ತಡೆಯಲು ನಮ್ಮ ಕೊರೊನಾ ವಾರಿಯರ್ಸ್ಗಳಿಗೆ ಕೈ ಜೋಡಿಸಬೇಕು, ಔಷಧಿ ಬರುತ್ತದೆ, ವೈದ್ಯರು ಚಿಕಿತ್ಸೆ ನೀಡುತ್ತಾರೆ ಎಂಬ ಆಲೋಚನೆಯನ್ನು ಬಿಟ್ಟು, ಸಾರ್ವಜನಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕಿದೆ, ಎಲ್ಲರೂ ಒಟ್ಟಾಗಿ ಸೇರಿ ಕೊರೊನಾದ ವಿರುದ್ಧ ಹೋರಾಡಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಕರೆ ನೀಡಿದರು.
ಕೊರೊನಾ ಬಗ್ಗೆ ಜಾಗೃತಿ: ಪೊಲೀಸ್ ಇಲಾಖೆಯ ವತಿಯಿಂದ ಜಾಥಾ - District Police Superintendent Dr.K. vamsi krishna
ಸಾರ್ವಜನಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕಿದೆ, ಎಲ್ಲರೂ ಒಟ್ಟಾಗಿ ಸೇರಿ ಕೊರೊನಾದ ವಿರುದ್ಧ ಹೋರಾಡಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಕರೆ ನೀಡಿದರು.
ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಕೊರೊನಾದ ಬಗ್ಗೆ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ, ಜನರಲ್ಲಿ ಕೊರೊನಾದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಕೈಯನ್ನು ಆಗಾಗ್ಗೆ ತೊಳೆಯುವುದನ್ನು ಮಾಡುವ ಮೂಲಕ ಕೊರೊನಾವನ್ನು ತಡೆಯಬಹುದು ಎಂದರು.
ಇನ್ನು ಜನರಲ್ಲಿನ ದೈನಂದಿಕ ಜೀವನದ ಅಂಶಗಳಲ್ಲಿ ಈ ಅಂಶಗಳು ಕೂಡಿರಬೇಕು ಎಂಬ ನಿಟ್ಟಿನಿಂದ ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.