ತುಮಕೂರು:ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಮೃತಪಟ್ಟಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಂಬಂಧಿಕರು ಖಾಸಗಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ.
ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹೇಮಲತಾ ಮೃತಪಟ್ಟಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.