ಕರ್ನಾಟಕ

karnataka

ETV Bharat / city

ಶಿವಮೊಗ್ಗದ ಬಳಿಕ ತುಮಕೂರಲ್ಲೂ ವೀರ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು - Etv bharat kannada

ಶಿವಮೊಗ್ಗದ ಬಳಿಕ ತುಮಕೂರಲ್ಲೂ ವೀರ ಸಾವರ್ಕರ್ ಫ್ಲೆಕ್ಸ್ ಹರಿದ ಪ್ರಕರಣ ನಡೆದಿದೆ.

ವೀರ ಸಾವರ್ಕರ್ ಫ್ಲೆಕ್ಸ್ ಹರಿದ ಪ್ರಕರಣ
ವೀರ ಸಾವರ್ಕರ್ ಫ್ಲೆಕ್ಸ್ ಹರಿದ ಪ್ರಕರಣ

By

Published : Aug 16, 2022, 12:57 PM IST

Updated : Aug 16, 2022, 4:54 PM IST

ತುಮಕೂರು:ಶಿವಮೊಗ್ಗದಲ್ಲಿ ವೀರ ಸಾರ್ವಕರ್ ಫ್ಲೆಕ್ಸ್ ಹರಿದ ಪ್ರಕರಣದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ತುಮಕೂರಲ್ಲೂ ಸಾವರ್ಕರ್ ಫ್ಲೆಕ್ಸ್ ಹರಿದು ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ. ಕಳೆದ ರಾತ್ರಿ ನಗರದ ಎಂಪ್ರೆಸ್ ಕಾಲೇಜು ಮುಂದೆ ಹಾಕಿದ್ದ ಸಾವರ್ಕರ್ ಫ್ಲೆಕ್ಸ್ ಹರಿಯಲಾಗಿದೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ 80 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು ಬಿಜೆಪಿ ಶಾಸಕ ಜ್ಯೋತಿಗಣೇಶ್ ಹಾಕಿಸಿದ್ದರು. ಮೂರು ದಿನಗಳ ಹಿಂದೆಯೇ ನಗರದಾದ್ಯಂತ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು, ಸಾವರ್ಕರ್ ಇರುವ ಫ್ಲೆಕ್ಸ್ ಮಾತ್ರ ಹರಿದು ಹಾಕಿದ್ದಾರೆ. ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೊದಲಿನಿಂದಲೂ ನಾವು ಶಾಂತಿ ಕಾಪಾಡಿಕೊಂಡು ಬಂದಿದ್ದೇವು. ಈಗ ಕೃತ್ಯ ಎಸಗಿರುವ ಕಿಡಿಗೇಡಿಗಳಿಗೆ ಕಂಡಲ್ಲಿ ಗುಂಡು ಹೊಡೆಯಬೇಕೆಂದು ಎಸ್​ಪಿ ಅವರಿಗೆ ಮನವಿ ಮಾಡುತ್ತೇನೆ. ಶಿವಮೊಗ್ಗದ ಹಾಗೇ ತುಮಕೂರಲ್ಲಿ ಆಗಬಾರದು. ಇಲ್ಲಿ ಎಲ್ಲರೂ ಒಂದಾಗಿದ್ದೇವೆ. ಆರೋಪಿಗಳನ್ನು ಬಿಡಬಾರದು ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

ಸೊಗಡು ಶಿವಣ್ಣ

ಸೋಮವಾರ ಸಾವರ್ಕರ್ ಫ್ಲೆಕ್ಸ್ ಹರಿದ ಪ್ರಕರಣದಿಂದಾಗಿ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಬೆನ್ನಲ್ಲೇ ತುಮಕೂರಲ್ಲೂ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ.

ಪ್ರಕರಣ ದಾಖಲು: ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಆಗಸ್ಟ್ 15 ರ ರಾತ್ರಿ ತುಮಕೂರು ನಗರದಲ್ಲಿ ಸಾವರ್ಕರ್ ಭಾವಚಿತ್ರವನ್ನು ಹರಿದು ಹಾಕಿದ ಘಟನೆಗೆ ಸಂಬಂಧಪಟ್ಟಂತೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದರು.

ಕಿಡಿಗೇಡಿಗಳು ಈ ಕೃತ್ಯವನ್ನು ನಡೆಸಿರೋದು ಸ್ಪಷ್ಟವಾಗುತ್ತಿದೆ. ಅಲ್ಲದೆ, ಶಾಂತಿ ಕದಡಲು ಪ್ರಯತ್ನ ನಡೆಸಿದ್ದಾರೆ. ಶೀಘ್ರದಲ್ಲೇ ಸಾವರ್ಕರ್ ಭಾವಚಿತ್ರವನ್ನು ಹರಿದು ಹಾಕಿರುವಂತಹ ಕಿಡಿಗೇಡಿಗಳನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

(ಇದನ್ನೂ ಓದಿ: ಶಿವಮೊಗ್ಗದಲ್ಲಿ ಗುರುವಾರದವರೆಗೆ 144 ಸೆಕ್ಷನ್ ಜಾರಿ.. ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ)

Last Updated : Aug 16, 2022, 4:54 PM IST

ABOUT THE AUTHOR

...view details