ತುಮಕೂರು: ತೀವ್ರ ಕುತೂಹಲ ಕೆರಳಿಸಿದ್ದ ಶಿರಾ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನೊಂದೆಡೆ, ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ದೊರೆಯದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿರಾ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ
ಶಿರಾ ನಗರಸಭೆಯ 31 ವಾರ್ಡ್‌ಗಳ ಪೈಕಿ 30 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ- 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ - 7 , ಬಿಜೆಪಿಯ ನಾಲ್ವರು ಹಾಗೂ ಎಂಟು ಮಂದಿ ಪಕ್ಷೇತರರು ಜಯಭೇರಿ ಬಾರಿಸಿದ್ದಾರೆ.
ನಗರಸಭೆಯ 31 ವಾರ್ಡ್‌ಗಳ ಪೈಕಿ 30 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ- 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ - 7 ಅಭ್ಯರ್ಥಿಗಳು, ಬಿಜೆಪಿಯ ನಾಲ್ವರು ಹಾಗೂ ಎಂಟು ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಒಂದು ವರ್ಷದ ಹಿಂದಷ್ಟೇ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಹೀಗಾಗಿ, ಕ್ಷೇತ್ರಾದ್ಯಂತ ಬಿಜೆಪಿಗೆ ಭಾರಿ ಬಹುಮತ ಬರಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಆದರೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ಗಮನಾರ್ಹ ಅಂಶ.