ತುಮಕೂರು: ದೃಷ್ಟಿ ದೋಷದ ಸಮಸ್ಯೆ ಎದುರಿಸುತ್ತಿರುವ ಮಕ್ಕಳ ಸಂಖ್ಯೆ ಏರಿಕೆಯಾಗುತ್ತಿದ್ದು, ಮುಖ್ಯವಾಗಿ ಗ್ರಾಮೀಣ ಭಾಗದ ಶಾಲಾ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆರಂಭವಾಗಿರುವ ಆನ್ಲೈನ್ ತರಗತಿಗಳು ಎನ್ನಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ದೃಷ್ಟಿ ದೋಷ ಸಮಸ್ಯೆ: ಕನ್ನಡಕ ವಿತರಣೆಗೆ ಮುಂದಾದ ಶ್ರೀ ಜಪಾನಂದ ಸ್ವಾಮೀಜಿ - Shri Japananda Swamiji distribute spectacles for students
ಆನ್ಲೈನ್ ತರಗತಿಗಳು ಆರಂಭವಾದ ನಂತರ ಪಾವಗಡ ತಾಲೂಕಿನಲ್ಲಿ ದೃಷ್ಟಿ ದೋಷದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಶಾಲಾಮಕ್ಕಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸುವ ಕಾರ್ಯಕ್ಕೆ ಪಾವಗಡದ ಶ್ರೀ ಜಪಾನಂದ ಸ್ವಾಮೀಜಿ ಮುಂದಾಗಿದ್ದಾರೆ.
ಇದನ್ನು ಸೂಕ್ಷ್ಮವಾಗಿ ಗಮನಿಸಿರುವ ಪಾವಗಡದ ಶ್ರೀ ಜಪಾನಂದ ಸ್ವಾಮೀಜಿ ಅವರು, ಶಾಲಾಮಕ್ಕಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಹಾಗಾಗಿ ಈಗಾಗಲೇ ಆನ್ಲೈನ್ ತರಗತಿಗಳನ್ನು ಎದುರಿಸುತ್ತಿರುವ ಹಾಗೂ ದೃಷ್ಟಿ ದೋಷದಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲಾಗುತ್ತಿದೆ.
ಕೋವಿಡ್ ಸೋಂಕು ಹರಡುವಿಕೆ ಆರಂಭಕ್ಕೂ ಮುನ್ನ ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿ ದೃಷ್ಟಿ ದೋಷದಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಕನ್ನಡಕಗಳನ್ನು ವಿತರಿಸಲಾಗುತ್ತಿತ್ತು. ಇದೀಗ ಆನ್ಲೈನ್ ತರಗತಿಗಳು ಆರಂಭವಾದ ನಂತರ ಪಾವಗಡ ತಾಲೂಕಿನಲ್ಲಿ ದೃಷ್ಟಿ ದೋಷದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈಗಾಗಲೇ ಪಾವಗಡ ತಾಲೂಕು ವ್ಯಾಪ್ತಿಯಲ್ಲಿ 3000 ಮಕ್ಕಳಿಗೆ ಕನ್ನಡಕಗಳನ್ನು ವಿತರಿಸಲಾಗಿದೆ.