ತುಮಕೂರು:ಸಿದ್ದರಾಮಯ್ಯ ನಮ್ಮ ಪಕ್ಷದ ಹಿರಿಯ ಹಾಗೂ ಪ್ರಭಾವಿ ನಾಯಕರು. ಅವರಿಗಿರುವಂತಹ ಜನಮನ್ನಣೆ ಅವರ ಹುಟ್ಟುಹಬ್ಬದ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸಹಕಾರಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಸ್ವಯಂಪ್ರೇರಿತರಾಗಿ ಬಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ನಮಗೆಲ್ಲರಿಗೂ ಒಂದು ರೀತಿ ಬಲ ಬಂದಂತಾಗಿದೆ. ಸಿದ್ದರಾಮಯ್ಯನವರಿಗೂ ಕೂಡ ಅವರ ಹುಟ್ಟುಹಬ್ಬ ಆಚರಿಸಲು ಆಸಕ್ತಿ ಇರಲಿಲ್ಲ. ಆದರೆ ಅವರ ಬೆಂಬಲಿಗರು ಆಯೋಜನೆ ಮಾಡಿದ್ದರು. ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ, ನಿಮಗೂ 75 ವರ್ಷವಾಗಿದೆ ಎಂದು ಹೇಳಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದಾರೆ ಎಂದು ತಿಳಿಸಿದರು.