ಕರ್ನಾಟಕ

karnataka

ETV Bharat / city

ಕುರುಬ ಮೀಸಲಾತಿ ಹೋರಾಟದಲ್ಲಿ ಜೊತೆ ಇರೋದಾಗಿ ಸಿದ್ದರಾಮಯ್ಯ ಹೇಳಿದ್ದಾರೆ: ಹೆಚ್.​ಎಂ.ರೇವಣ್ಣ

ಕುರುಬ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಟಿ ಬೇಕು ಅಥವಾ ಬೇಡ ಎಂದು ಎಲ್ಲಿಯೂ ಹೇಳಿಲ್ಲ. ನಾನು ಕುರುಬ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಿಲ್ಲ. ನಾನು ಜೊತೆಯಲ್ಲಿ ಇರುತ್ತೇನೆ ಎಂಬುದಾಗಿ ಹೇಳಿದ್ದಾರೆಂದು ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ.

ಎಚ್​ಎಂ ರೇವಣ್ಣ
ಎಚ್​ಎಂ ರೇವಣ್ಣ

By

Published : Dec 25, 2020, 8:16 PM IST

ತುಮಕೂರು: ನಾನು 5 ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವನು. ನನ್ನ ಜೊತೆ ಬೇರೆ ಸಮುದಾಯದವರು ಕೂಡ ಇದ್ದಾರೆ. ನಾನು ಕುರುಬ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಿಲ್ಲ. ನಾನು ಜೊತೆಯಲ್ಲಿ ಇರುತ್ತೇನೆ ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿರುವುದಾಗಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಟಿ ಬೇಕು ಅಥವಾ ಬೇಡ ಎಂದು ಎಲ್ಲಿಯೂ ಹೇಳಿಲ್ಲ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರೇವಣ್ಣ

ಈ ನಡುವೆ ಮೀಸಲಾತಿ ಹೋರಾಟದಲ್ಲಿ ಆರ್​ಎಸ್ಎಸ್​​ನವರ ಹಸ್ತಕ್ಷೇಪ ಇದೆ ಎಂಬ ಅನುಮಾನ ಸಿದ್ದರಾಮಯ್ಯನವರಲ್ಲಿ ಮೂಡಿದೆ. ಈ ಕುರಿತು ನಾವು ಕುಳಿತು ಚರ್ಚಿಸಿ ಬಗೆಹರಿಸುತ್ತೇವೆ. ಅಲ್ಲದೆ ಬಹಿರಂಗ ಸಭೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕರಿಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ABOUT THE AUTHOR

...view details