ತುಮಕೂರು :ನಗರದ ಮಳೆ ಕೋಟೆ ಬಡಾವಣೆಯಲ್ಲಿ ಸ್ಮಾರ್ಟ್ಸಿಟಿ ಯೋಜನೆ ಅಡಿ ನಡೆಸಲಾಗುತ್ತಿರುವ ಕಾಮಗಾರಿಯಿಂದ ರಸ್ತೆಯಲ್ಲಿರುವ ಛೇಂಬರ್ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಆಟೋ ಚಾಲಕ ಶಂರೇಜ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಬೈಕ್ ಸವಾರರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಅಪಘಾತದ ಭೀಕರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.