ಪಾವಗಡ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ನೂರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಎಲ್ಲರಿಗೂ ಲ್ಯಾಪ್ಟಾಪ್ ವಿತರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - Insist on distributing the laptop'
ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ನೂರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ ವಿತರಿಸಿದ್ದರು. ನಂತರ 2018-19ನೇ ಸಾಲಿನಲ್ಲಿ ಯೋಜನೆ ಸ್ಥಗಿತಗೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಸಮನಾಗಿ ಕಾಣಬೇಕು. ಎಲ್ಲಾ ವರ್ಗಗಳಲ್ಲೂ ಬಡ ವಿದ್ಯಾರ್ಥಿಗಳಿದ್ದಾರೆ. ಕೇವಲ ಒಂದು ವರ್ಗಕ್ಕೆ ಲ್ಯಾಪ್ಟಾಪ್ ವಿತರಿಸಿ ಮತ್ತೊಂದು ವರ್ಗಕ್ಕೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.
ತಹಶೀಲ್ದಾರ್ ವರದರಾಜು ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ವರದರಾಜು ಮಾತನಾಡಿ, ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.