ತುಮಕೂರು :ಜಿಲ್ಲೆಯ ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕರೊಬ್ಬರು ಸೇರಿದಂತೆ 22 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ. ಶಾಲೆಗೆ ಒಂದು ವಾರ ಕಾಲ ರಜೆ ಘೋಷಿಸಲಾಗಿದೆ.
ಮೊದಲಿಗೆ ಓರ್ವ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ಧೃಡಪಟ್ಟ ತಕ್ಷಣ ಇನ್ನುಳಿದಂತೆ ಶಾಲೆಯಲ್ಲಿದ್ದ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಒಟ್ಟು 22 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ.