ತುಮಕೂರು: ತಾಲೂಕಿನ ಹೊನ್ನುಡಿಕೆ ಸಮೀಪದ ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಲಾಗಿದೆ. ಹುಂಡಿ ಒಡೆದು ನಗದು ಹಾಗೂ ದೇವರ ವಿಗ್ರಹದ ಮೇಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ತುಮಕೂರು: ರಾತ್ರೋರಾತ್ರಿ ದೇವಾಲಯದಲ್ಲಿ ಕಳ್ಳತನ - ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ
ತುಮಕೂರುನ ಹೊನ್ನುಡಿಕೆ ಸಮೀಪದ ಹುಳ್ಳೇನಹಳ್ಳಿ ಗ್ರಾಮದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ.
ತುಮಕೂರು ರಾತ್ರೋರಾತ್ರಿ ದೇವಾಲಯದಲ್ಲಿ ಕಳ್ಳತನ
ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಹೆಬ್ಬೂರು ಠಾಣೆ ಪೊಲೀಸರಿಂದ ಶೋಧಕಾರ್ಯ ನಡೆದಿದೆ. ಈ ದೇವಾಲಯ ಗ್ರಾಮದ ಮಧ್ಯಭಾಗದಲ್ಲಿದೆ. ರಾತ್ರಿ ನಾಲ್ಕೈದು ಮಂದಿ ಓಡಾಡುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಅಲ್ಲದೆ ಅಪರಿಚಿತ ವ್ಯಕ್ತಿಗಳ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಚೋರರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ:ಸ್ನಾನಕ್ಕೆ ನದಿಗಿಳಿದ ನಾಲ್ವರು ಹುಡುಗಿಯರು, ಮೂವರು ಮಹಿಳೆಯರು ನೀರುಪಾಲು