ತುಮಕೂರು: ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ನಡೆದಿದೆ. ಮೃತರನ್ನು ಸ್ವಿಫ್ಟ್ ಕಾರಿನಲ್ಲಿದ್ದ ಸಿಎಸ್ ಪುರ ಗ್ರಾಮದ ರಾಜೇಶ್ (32) ಮತ್ತು ಬೆಲವತ್ತ ಗ್ರಾಮದ ವೆಂಕಟಾಚಲ(41) ಎಂದು ಗುರುತಿಸಲಾಗಿದೆ.
ತುಮಕೂರು: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ.. ಇಬ್ಬರು ದುರ್ಮರಣ - accident between two cars
ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ಸಂಭವಿಸಿದೆ.
ತುಮಕೂರು ಎರಡು ಕಾರುಗಳ ನಡುವೆ ನಡೆದ ಅಪಘಾತ: ಇಬ್ಬರ ಸಾವು
ಮತ್ತೊಂದು ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಗಾಯಗೊಂಡಿರುವ ಇನ್ನೂ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಸಂಚಾರ ದಟ್ಟಣೆ
Last Updated : Apr 5, 2022, 10:11 PM IST