ತುಮಕೂರು:ಬೆಂಗಳೂರು ಸಮೀಪ ಇರುವುದರಿಂದ ತುಮಕೂರು ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ನಿತ್ಯ 6 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಜತೆಗೆ 24 ಗಂಟೆಯೊಳಗೆ ಪರೀಕ್ಷೆಯ ಫಲಿತಾಂಶವನ್ನು ನೀಡಲಾಗುತ್ತಿದೆ. ಕೊರೊನಾ ಸೋಂಕು ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ಸಹ ನೀಡಲಾಗುತ್ತಿದೆ ಎಂದರು.