ತುಮಕೂರು:ನಿನ್ನೆ ರಾತ್ರಿ ಬೆಳಗುಂಬ ಗ್ರಾಮದಲ್ಲಿ ನಡೆದ ಗಣೇಶ ನಿಮಜ್ಜನ ಮೆರವಣಿಗೆ ಜೋರಾಗಿತ್ತು. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್ ಅವರು ಯುವಕರು, ತಮ್ಮ ಬೆಂಬಲಿಗರ ಜೊತೆ ಟಪಾಂಗುಚ್ಚಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ಗಣೇಶ ನಿಮಜ್ಜನ ಮೆರವಣಿಗೆ: ಟಪಾಂಗುಚ್ಚಿ ಸ್ಟೆಪ್ ಹಾಕಿದ ಶಾಸಕ ಗೌರಿಶಂಕರ್ - ಟಪಾಂಗುಚ್ಚಿ ಸ್ಟೆಪ್ ಹಾಕಿದ ಶಾಸಕ ಗೌರಿಶಂಕರ್
ಬೆಳಗುಂಬ ಗ್ರಾಮದಲ್ಲಿ ನಡೆದ ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್, ಯುವಕರೊಂದಿಗೆ ಟಪ್ಪಾಂಗುಚ್ಚಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.

ಯುವಕರೊಂದಿಗೆ ಟಪಾಂಗುಚ್ಚಿ ಸ್ಟೆಪ್ ಹಾಕಿದ ಶಾಸಕ ಗೌರಿಶಂಕರ್
ಸ್ಥಳದಲ್ಲಿದ್ದ ಜೆಡಿಎಸ್ ಕಾರ್ಯಕರ್ತರೊಂದಿಗೆ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಗೌರಿಶಂಕರ್, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಯುವಕರೊಂದಿಗೆ ಟಪಾಂಗುಚ್ಚಿ ಸ್ಟೆಪ್ ಹಾಕಿದ ಶಾಸಕ ಗೌರಿಶಂಕರ್
ಶಾಸಕರು ಈ ಹಿಂದೆ ಕೆಂಪೇಗೌಡ ಜಯಂತ್ಯುತ್ಸವ ಕಾರ್ಯಕ್ರಮದಲ್ಲೂ ಇದೇ ರೀತಿ ಹೆಜ್ಜೆ ಹಾಕಿದ್ದರು. ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಶಾಸಕರು, ಯುವಕರೊಂದಿಗೆ ಬೆರೆಯುತ್ತಿದ್ದಾರೆ.