ತುಮಕೂರು:ನಗರಕ್ಕೆ ಸುಲಭವಾಗಿ ಹೊರ ಜಿಲ್ಲೆಗಳಿಂದ ಬರುವ ಸಾರ್ವಜನಿಕರ ಪ್ರವೇಶ ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರು ಎಲ್ಲಾ ಚೆಕ್ ಪೋಸ್ಟ್ಗಳ ಬಳಿ ನಿರಂತರವಾಗಿ ಪ್ಯಾಟ್ರೋಲಿಂಗ್ ಮಾಡುತ್ತಿದ್ದಾರೆ.
ತುಮಕೂರು ನಗರದ ಹೊರವಲಯದಲ್ಲಿ ಹಾದು ಹೋಗಿರುವ ಬೆಂಗಳೂರು ಮತ್ತು ಮುಂಬೈ ನಡುವಿನ ರಾಷ್ಟ್ರೀಯ ಹೆದ್ದಾರಿ 48 ಮೂಲಕ ಹೊರ ಜಿಲ್ಲೆಯಿಂದ ಜನರು ನಿರಂತರವಾಗಿ ಬರುತ್ತಿದ್ದರು. ಇದಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಿರುವ ಜಿಲ್ಲಾ ಪೊಲೀಸ್ ಇಲಾಖೆ, ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ.