ತುಮಕೂರು: ಆಹಾರ ಹುಡುಕುತ್ತಾ ಗ್ರಾಮಕ್ಕೆ ಎಂಟ್ರಿಕೊಟ್ಟ 2 ಕರಡಿಗಳು ಜನರ ಕೂಗಾಟ, ಕಿರುಚಾಟಕ್ಕೆ ಬೆಚ್ಚಿಬಿದ್ದು ದಿಕ್ಕಾಪಾಲಾಗಿ ಓಡಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಕ್ಕರಸನಹಳ್ಳಿಯಲ್ಲಿ ನಡೆದಿದೆ.
ತೋಟದಲ್ಲಿ ಕರಡಿಗಳಿರುವುದನ್ನ ಗಮನಿಸಿದ ಚಿಕ್ಕರಸನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರನ್ನ ಕಂಡ ಕರಡಿಗಳು ಯಾರ ಕೈಗೂ ಸಿಗದೆ ಅಲ್ಲಿಂದ ಕಾಲ್ಕಿತ್ತಿವೆ.