ತುಮಕೂರು :ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಗೆ ಸೇರಿದ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.
ತುಮಕೂರು : ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ಚಿಣ್ಣರ ಸಾವು - tumkur
ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ..
![ತುಮಕೂರು : ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ಚಿಣ್ಣರ ಸಾವು tumkur](https://etvbharatimages.akamaized.net/etvbharat/prod-images/768-512-13318351-thumbnail-3x2-net.jpg)
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು
ಮೃತರನ್ನು ಮಾದಿಹಳ್ಳಿ ಗ್ರಾಮದ ರಮೇಶ್ ಎಂಬುವರ ಮಕ್ಕಳಾದ ರಾಮಚಂದ್ರ (14) ಹಾಗೂ ಯಶವಂತ್ (12) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಮೈಸೂರು-ತಿ.ನರಸೀಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು