ತುಮಕೂರು : ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡುವ ಅವಮಾನ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಎಸ್ವೈ ಗೌರವಕ್ಕೆ ಧಕ್ಕೆಯಾದ್ರೆ ವೀರಶೈವ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದಂತೆ - ಜಂಗಮ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
ಸಿಎಂ ಸ್ಥಾನದಿಂದ ಬಿಎಸ್ವೈ ಅವರನ್ನು ಕೆಳಗಿಳಿಸುವ ಹುನ್ನಾರವನ್ನು ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಸಮಾಜ ಸಹಿಸುವುದಿಲ್ಲ. ಕುತಂತ್ರ ನಡೆದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು..
ತಿಪಟೂರಿನಲ್ಲಿ ಸಭೆ ಸೇರಿದ್ದ 10 ವಿವಿಧ ಮಠಗಳ ಮಠಾಧೀಶರು ಜಂಟಿ ಪ್ರತಿಕಾಗೋಷ್ಠಿ ನಡೆಸಿ, ಯಡಿಯೂರಪ್ಪನವರು ಅಧಿಕಾರವನ್ನು ಪೂರ್ಣಗೊಳಿಸಲು ಎಲ್ಲರೂ ಬೆಂಬಲ ನೀಡಬೇಕು. ಸಿಎಂ ಸ್ಥಾನದಿಂದ ಬಿಎಸ್ವೈ ಅವರನ್ನು ಕೆಳಗಿಳಿಸುವ ಹುನ್ನಾರವನ್ನು ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಸಮಾಜ ಸಹಿಸುವುದಿಲ್ಲ. ಕುತಂತ್ರ ನಡೆದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಂಗಮ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಶ್ರೀ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ, ಬೆಳ್ಳಾವಿ ಖಾರದ ವೀರಬಸವ ಮಹಾಸ್ವಾಮೀಜಿ, ವಿರಕ್ತ ಮಠದ ಶಶಿಶೇಖರ್ ಬಸವ ಮಹಾಸ್ವಾಮೀಜಿ, ಕುಣಿಗಲ್ ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಮಠದ ಶ್ರೀ ಶಿವಪ್ರಕಾಶ ಶಿವಾಚಾರ್ಯ ಮಹಾಸ್ವಾಮೀಜಿ, ನುಗ್ಗೇಹಳ್ಳಿ ಹಿರೇಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹಾಜರಿದ್ದರು.