ಮುಂಬೈ(ಮಹಾರಾಷ್ಟ್ರ) :ನಿನ್ನೆ ರಾತ್ರಿ ಮುಂಬೈನಲ್ಲಿ ದಾಳಿ ನಡೆಸಿರುವ ಮಾದಕ ವಸ್ತು ನಿಯಂತ್ರಣ ದಳ (ಎನ್ಸಿಬಿ) ಇಬ್ಬರು ನೈಜೀರಿಯನ್ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳಿಂದ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಎನ್ಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ಇಜಾಜ್ ಖಾನ್ ವಿಚಾರಣೆ ವೇಳೆ ಸಿಕ್ಕ ಸುಳಿವುಗಳನ್ನು ಆಧರಿಸಿ ನವಿ ಮುಂಬೈ ಮತ್ತು ಜೋಗೇಶ್ವರಿ ಪ್ರದೇಶಗಳಲ್ಲಿ ಎನ್ಸಿಬಿ ದಾಳಿ ನಡೆಸಿತ್ತು.