ಅಲಿಗಢ (ಉತ್ತರ ಪ್ರದೇಶ): ಟಾಟಾ ಮ್ಯಾಜಿಕ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.
ಗಾಯಾಳುಗಳನ್ನು ಅಲಿಗಢದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಭಾಗದಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಳ್ಳಲು ಹೋಗಿ ಟಾಟಾ ಮ್ಯಾಜಿಕ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ವಾಹನ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ.