ಥಾಣೆ (ಮಹಾರಾಷ್ಟ್ರ): ರಾಸಾಯನಿಕ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲ ಸೇವಿಸಿ, ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯೊಂದರಲ್ಲಿ ದುರಂತ ಸಂಭವಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಅನಾಹುತ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.