ಕರ್ನಾಟಕ

karnataka

ETV Bharat / crime

ವಿಜಯನಗರ: ಲಾರಿ ಹರಿದು 30ಕ್ಕೂ ಹೆಚ್ಚು ಕುರಿಗಳು ಸಾವು - ವಿಜಯನಗರ ಕ್ರೈಮ್‌ ಸುದ್ದಿ

ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಲಾರಿ ಹರಿದ ಪರಿಣಾಮ 30ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

30 sheeps died in road accident, vijayanagara district
ಹೊಸಪೇಟೆ: ಲಾರಿ ಹರಿದು 30ಕ್ಕೂ ಹೆಚ್ಚು ಕುರಿಗಳು ಸಾವು

By

Published : Aug 31, 2021, 12:33 PM IST

ಕೂಡ್ಲಿಗಿ(ವಿಜಯನಗರ): ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಲಾರಿ ಹರಿದ ಪರಿಣಾಮ 30 ಅಧಿಕ ಕುರಿಗಳು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ರಾಷ್ಟೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಕುರಿಗಳ ಸ್ಥಿತಿ ಗಂಭೀರವಾಗಿದೆ.

ಮೃತಪಟ್ಟ ಕುರಿಗಳು ಗೊಲ್ಲರಹಟ್ಟಿ ಗ್ರಾಮದ ಶಿವರುದ್ರಪ್ಪ ಎಂಬುವರಿಗೆ ಸೇರಿವೆ. ಲಾರಿ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಕುರಿಗಳನ್ನು ಕಳೆದುಕೊಂಡಿರುವ ರೈತ ಕಂಗಾಲಾಗಿದ್ದಾನೆ. ಘಟನಾ ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details