ಮುಜಾಫರ್ಪುರ/ಲಖನೌ:ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ ದಂಪತಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಮುಜಾಫರ್ಪುರ ಜಿಲ್ಲೆಯ ದರ್ಗಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾಮಚಂದ್ರ ಹಾಗೂ ಅವರ ಪತ್ನಿ ಮಂಜು ದೇವಿ ನಿನ್ನೆ ಸಾವನ್ನಪ್ಪಿದ್ದು, 24 ಗಂಟೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ವಿಷಕಾರಿ ಮದ್ಯ ಸೇವನೆಯೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.