ರಾಯ್ಪುರ (ಛತ್ತೀಸ್ಗಢ): ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ ಐವರು ರೋಗಿಗಳು ಮೃತಪಟ್ಟಿರುವ ಘಟನೆ ರಾಯ್ಪುರದಲ್ಲಿ ನಡೆದಿದೆ.
ಛತ್ತೀಸ್ಗಢದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ಐವರು ರೋಗಿಗಳು ದುರ್ಮರಣ - Raipur fire news
ಛತ್ತೀಸ್ಗಢದ ರಾಯ್‌ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಐವರು ರೋಗಿಗಳು ಸಾವನ್ನಪ್ಪಿದ್ದಾರೆ.
ರಾಯ್‌ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ
ಶನಿವಾರ ರಾತ್ರಿ ರಾಯ್‌ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಅಲ್ಲಿ ದಾಖಲಾಗಿದ್ದ ಉಳಿದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ರಾಯ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್ ತಿಳಿಸಿದ್ದಾರೆ.