ಅಲಿಗಢ:ಉತ್ತರ ಪ್ರದೇಶದಲ್ಲಿ ಕೋವಿಡ್ ನಿಯಂತ್ರಿಸಲು ಲಾಕ್ಡೌನ್ನಂತಹ ಕಠಿಣ ಕರ್ಫ್ಯೂ ಜಾರಿಯಲ್ಲಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಲಿಗಢ ಜಿಲ್ಲೆಯ ಕರ್ಸುವಾ ಗ್ರಾಮದಲ್ಲಿ ವಿಷಪೂರಿತ ಮದ್ಯ ಸೇವಿಸಿ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ.
ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯ ಸೇವಿಸಿ, ಒಟ್ಟು 19 ಮಂದಿ ಸಾವನ್ನಪ್ಪಿದ್ದಾರೆ ಗ್ರಾಮಸ್ಥರು ಎಂದು ಆರೋಪಿಸಿದ್ದು, ಈ ಆರೋಪವನ್ನು ಜಿಲ್ಲಾಡಳಿತ ತಳ್ಳಿಹಾಕಿದೆ. ಕೆಲವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.