ಇಂದೋರ್ (ಮಧ್ಯಪ್ರದೇಶ): ಪೆಟ್ರೋಲ್ ಬಂಕ್ ಹೊರಗಡೆ ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಆರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ: ಆರು ವಿದ್ಯಾರ್ಥಿಗಳ ದುರ್ಮರಣ - Madhya Pradesh road accident
![ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ: ಆರು ವಿದ್ಯಾರ್ಥಿಗಳ ದುರ್ಮರಣ 6 students died in a road accident in Indore](https://etvbharatimages.akamaized.net/etvbharat/prod-images/768-512-10738588-thumbnail-3x2-megha.jpg)
08:13 February 23
ಢಾಬಾದಿಂದ ಊಟ ಮಾಡಿ ಮನೆಗೆ ಹೋಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿ ಆರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ತಡರಾತ್ರಿ ಢಾಬಾದಿಂದ ಊಟ ಮಾಡಿ ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟ್ಯಾಂಕರ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು.. ಮದುವೆ ಮುಗಿಸಿ ಹೊರಟವರು ಮಸಣ ಸೇರಿದರು
ಇಂದು ಬೆಳಗ್ಗೆಯಷ್ಟೇ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಕತಿಹಾರ್ನಲ್ಲಿ ನಡೆದಿತ್ತು.