ತಾರ್ನ್ ತರಣ್ (ಪಂಜಾಬ್):ಪಂಜಾಬ್ನ ತಾರ್ನ್ ತರಣ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುತ್ತಿದ್ದ ಪಾಕಿಸ್ತಾನ ಮೂಲದ ಡ್ರಗ್ ಸ್ಮಗ್ಲರ್ನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.
ತಾರ್ನ್ ತರಣ್ನಲ್ಲಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತರಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ, ಪಾಕ್ ನುಸುಳುಕೋರನು ಭಾರತಕ್ಕೆ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ತಿಳಿದು ಬಂದಿದೆ.