ಕತಿಹಾರ್ (ಬಿಹಾರ): ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಕತಿಹಾರ್ನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು.. ಮದುವೆ ಮುಗಿಸಿ ಹೊರಟವರು ಮಸಣ ಸೇರಿದರು - ಬಿಹಾರದ ಕತಿಹಾರ್
कटिहार जिले के कुर्सेला के समीप ट्रक और स्कॉर्पियो की टक्कर में 8 लोगों की मौत हो गई. इस हादसे में तीन लोगों के घायल होने की खबर है.

ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು
06:51 February 23
ಬಿಹಾರದ ಕತಿಹಾರ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವು
ಭೀಕರ ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತರು ಹಾಗೂ ಗಾಯಾಳುಗಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಕಾರಿನಲ್ಲಿ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುತ್ತಿದ್ದರು ಎಂದು ಹೇಳಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Last Updated : Feb 23, 2021, 7:24 AM IST