ಬಂಟ್ವಾಳ(ದಕ್ಷಿಣ ಕನ್ನಡ): ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಿದ ತಂಡವೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಂಟ್ವಾಳ ನಗರ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳದಲ್ಲಿ ಬಾಲಕಿ ಅಪಹರಿಸಿ ಗ್ಯಾಂಗ್ರೇಪ್ ಆರೋಪ; ಇಬ್ಬರು ಪೊಲೀಸರ ವಶಕ್ಕೆ - ಬಾಲಕಿ ಅಪಹರಿಸಿ ಗ್ಯಾಂಗ್ರೇಪ್,
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಐವರು ಆರೋಪಿಗಳ ಗುಂಪೊಂದು ಬಾಲಕಿಗೆ ಅರಿವಿಲ್ಲದಂತೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಕಾರಿನಲ್ಲಿ ಬಂದ ಪರಿಚಿತ ವ್ಯಕ್ತಿ ಇನ್ನಿತರರು ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿರುವ ಕುರಿತು ಬಾಲಕಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಪಹರಣ, ಅತ್ಯಾಚಾರ, ಬೆದರಿಕೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದೂರಿನ ಆಧಾರದ ಮೇಲೆ ಐವರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಈ ಪೈಕಿ ಇಬ್ಬರನ್ನು ವಶಕ್ಕೆ ಪಡೆದಿರುವುದಾಗಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಇತರೆ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಸದ್ಯ ಸಂತ್ರಸ್ತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.