ಶಿವಮೊಗ್ಗ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಮಾಚೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಜಯಂತಿ ಗ್ರಾಮದ ಮಂಜುನಾಥ್ (25), ಅಂಥೋಣಿ ಮೃತರು.
ಶಿವಮೊಗ್ಗ: ಸರ್ಕಾರಿ ಬಸ್-ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವು - ಬಸ್-ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವು
ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ.
ಶಿವಮೊಗ್ಗ: ಬಸ್-ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವು
ಶಿವಮೊಗ್ಗ ಕಡೆಯಿಂದ ಭದ್ರಾವತಿಯತ್ತ ಹೊರಟಿದ್ದ ಬೈಕ್ ಸವಾರರಿಗೆ ಭದ್ರಾವತಿ ಕಡೆಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.