ಧಾರವಾಡ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಾಲ್ವರು ಶ್ರೀಗಂಧ ಕಳ್ಳರನ್ನು ಬಂಧಿಸಿದ್ದಾರೆ. ಗುರುಮೂರ್ತಿ, ಮುದಕಪ್ಪ ಪೂಜಾರಿ, ಭೀಮಪ್ಪ ಸುಣಗಾರ, ಹಿರಿಯಪ್ಪ ಹಿರೇಮನಿ ಬಂಧಿತ ಆರೋಪಿಗಳಾಗಿದ್ದಾರೆ.
ಅರಣ್ಯ ಇಲಾಖೆ ಕಾರ್ಯಾಚರಣೆ: ನಾಲ್ವರು ಶ್ರೀಗಂಧ ಕಳ್ಳರ ಬಂಧನ - dharwad latest news
ಶ್ರೀಗಂಧದ ಮರ ಕಡಿದು ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಕ್ಕೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಆರೋಪಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಬಂದಿಸಿದ್ದಾರೆ.
Arrest of four sandalwood thieves
ಬಂಧಿತರಿಂದ 250 ಕೆಜಿ 25 ಲಕ್ಷ ರೂ ಮೌಲ್ಯದ ಶ್ರೀಗಂಧ, ಪಲ್ಸರ್ ಬೈಕ್ ಹಾಗೂ ಅಲ್ಟೋ ಕಾರ ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಧಾರವಾಡದ ಹೊರವಲಯದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಶ್ರೀಗಂಧದ ಮರ ಕಡಿದು ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
Last Updated : Jun 17, 2021, 5:02 PM IST