ಚಾಮರಾಜನಗರ: ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ಧಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ನಡೆದಿದೆ.
ತಮಿಳುನಾಡು ಮೂಲದ ರಂಗಸ್ವಾಮಿ(35), ಸಂಜೀವಕುಮಾರ್(41), ಎನ್.ವಿನೋದ್(36), ಕದಿರೇಸನ್(45), ಸೆಲ್ವನಾಯಗಂ(44) ಬಂಧಿತ ಆರೋಪಿಗಳು. ಈ ಐವರು ಆನೆ ದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾರಿನಲ್ಲಿ ಅನುಮಾನಾಸ್ಪದವಾಗಿ ಬರುತ್ತಿದ್ದಾಗ ತಪಾಸಣೆಗೆ ಒಳಪಡಿಸಿದ ವೇಳೆ ಆನೆಯ ಎರಡು ದಂತ ಸಿಕ್ಕಿವೆ. ನಂತರ ಕಾರಿನ ಸಮೇತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.