ಉಳ್ಳಾಲ: ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದು, ಈ ವೇಳೆ ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮುಡಿಪು ಬಳಿಯ ಮೂಳೂರು ಕ್ರಾಸ್ ಹತ್ತಿರ ನಡೆದಿದೆ.
ಬೈಕ್ - ಸ್ಕೂಟರ್ ಡಿಕ್ಕಿ: ರಸ್ತೆಗೆ ಬಿದ್ದ ಸವಾರನ ಮೇಲೆ ಹರಿದ ಬಸ್ - ulalla road accident
ಮುಡಿಪು ಬಳಿಯ ಮೂಳೂರು ಕ್ರಾಸ್ ಹತ್ತಿರ ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ, ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Bike rider died in road accident
ನಿನ್ನೆ ಸಂಜೆ ವೇಳೆಗೆ ಈ ಘಟನೆ ಸಂಭವಿಸಿದ್ದು, ಮೃತನ ಗುರುತು ಪತ್ತೆಯಾಗಬೇಕಿದೆ. ಮುಡಿಪು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಚಲಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಸ್ಕೂಟರ್ ಸವಾರರಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.