ಕರ್ನಾಟಕ

karnataka

ETV Bharat / crime

ದೆಹಲಿಯ ಬಿಜೆಪಿ ಮುಖಂಡ ನೇಣಿಗೆ ಶರಣು - ಪಶ್ಚಿಮ ದೆಹಲಿ

ದೀರ್ಘಕಾಲದ ವರೆಗೆ ಪಶ್ಚಿಮ ದೆಹಲಿಯ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಗುರ್ವಿಂದರ್ ಸಿಂಗ್ ಬಾವಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

BJP leader commits suicide in Delhi
ದೆಹಲಿಯ ಬಿಜೆಪಿ ಮುಖಂಡ ನೇಣಿಗೆ ಶರಣು

By

Published : Mar 30, 2021, 9:21 AM IST

ನವದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಮಾಜಿ ಉಪಾಧ್ಯಕ್ಷ ಗುರ್ವಿಂದರ್ ಸಿಂಗ್ ಬಾವಾ (58) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯಲ್ಲಿರುವ ಇವರ ನಿವಾಸದ ಬಳಿಯ ಪಾರ್ಕ್​ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರ್ವಿಂದರ್ ಸಿಂಗ್​ರ ಈ ನಿರ್ಧಾರಕ್ಕೆ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್​ ನೋಟ್​ ಕೂಡ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬಾವಾ ಅವರು ದೀರ್ಘಕಾಲದ ವರೆಗೆ ಪಶ್ಚಿಮ ದೆಹಲಿಯ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.

ABOUT THE AUTHOR

...view details