ನವದೆಹಲಿ: ಅಪ್ರಾಪ್ತೆ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಒಡಹುಟ್ಟಿದ್ದವರು ಎಂದು ಪೊಲೀಸರು ತಿಳಿಸಿದ್ದಾರೆ. 2009 ರಲ್ಲಿ ಕೋರ್ಟ್ ಕೂಡ ಇವರನ್ನು ಪರಾರಿಯಾದ ವ್ಯಕ್ತಿ ಎಂದು ಘೋಷಿಸಿತ್ತು. ಸದ್ಯ ಬಂಧನದ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.
2006 ರಲ್ಲಿ ನಂಗ್ಲೋಯ್ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿತ್ತು. 2016ರ ಏಪ್ರಿಲ್ 14 ಮಧ್ಯಾಹ್ನ ತನ್ನ 13 ವರ್ಷದ ಮಗಳು ಸ್ನೇಹಿತನ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದಳು, ಆದರೆ ಮನೆಗೆ ಹಿಂತಿರುಗಲಿಲ್ಲ ಎಂದು ಬಾಲಕಿ ತಂದೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.