ಸಿಧಿ (ಮಧ್ಯಪ್ರದೇಶ): ಸುಮಾರು 54 ಮಂದಿ ಪ್ರಯಾಣಿಕರಿದ್ದ ಬಸ್ವೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದ್ದು, 42 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ.
ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಏಳು ಮಂದಿಯನ್ನು ರಕ್ಷಿಸಿದ್ದಾರೆ. ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ 37 ಮೃತದೇಹಗಳನ್ನ ಮೇಲಕ್ಕೆತ್ತಲಾಗಿದೆ. ಸಿಧಿಯಿಂದ ಸತ್ನಾಗೆ ಬಸ್ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.