ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಗದಗ ತಾಲೂಕಿನ ಹರ್ತಿ ಬಳಿ ಸಂಭವಿಸಿದೆ.
ಓದಿ: ಪೊಲೀಸರ ವಿರುದ್ಧ ಸುಳ್ಳು ವಿಡಿಯೋ ವೈರಲ್: ಆರೋಪಿ ಬಂಧನ, ಲಕ್ಷ್ಮಣ ಮರ್ಡರ್ ಕೇಸ್ ನಂಟು

ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಜಿಮ್ಸ್ಗೆ ರವಾನಿಸಿದ್ದಾರೆ. ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದ್ದು, ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ. ಕಾರಲ್ಲಿದ್ದವರು ಹೊಲದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.
ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ಈ ದುರ್ಘಟನೆ ನೆಡದಿದೆ. ಗಾಯಗೊಂಡ ಶಂಕ್ರಪ್ಪ ಎಂಬಾತ ಗ್ರಾಮಸ್ಥರಿಗೆ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದೆವು ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.