ಜೌನ್‌ಪುರ (ಉತ್ತರ ಪ್ರದೇಶ): ದೇಶದ ತ್ರಿವರ್ಣಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಡಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಪ್ರಕರಣ ದಾಖಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಈ ಹಿಂದೆ ಇದ್ದ ರಾಜ್ಯ ಧ್ವಜವನ್ನು ಮರಳಿ ಅಧಿಕೃತಗೊಳಿಸುವವರೆಗೂ ತಮ್ಮ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ(ಪಿಡಿಪಿ)ದ ಸದಸ್ಯರು ರಾಷ್ಟ್ರಧ್ವಜವನ್ನು ಹಾರಿಸುವುದಿಲ್ಲ ಎಂದು ಮುಫ್ತಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ಸ್ವಪಕ್ಷ ಸದಸ್ಯರು ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು.