ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ಕೋಟಿ ಕೋಟಿ ರೂಪಾಯಿ ಹಣ, ಮಾದಕ ವಸ್ತು ಹಾಗೂ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇಲ್ಲಿಯವರೆಗೆ 37.72 ಕೋಟಿ ರೂ. ನಗದು, 9.5 ಕೋಟಿ ರೂ. ಮೌಲ್ಯದ ಮದ್ಯ ಮತ್ತು 114.44 ಕೋಟಿ ಮೌಲ್ಯದ ಡ್ರಗ್ ಸೇರಿ ಒಟ್ಟು 248.9 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪಶ್ಚಿಮ ಬಂಗಾಳದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಸಂಜೋಯ್ ಬಸು ತಿಳಿಸಿದ್ದಾರೆ.