ಕರ್ನಾಟಕ

karnataka

ETV Bharat / crime

ಅಪಘಾತಕ್ಕೀಡಾದ ಪ್ರಿಯಾಂಕಾ ಗಾಂಧಿ ಬೆಂಗಾವಲು ವಾಹನ - ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ

ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಮೃತಪಟ್ಟ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ರಾಂಪುರಕ್ಕೆ ತೆರಳುತ್ತಿದ್ದ ವೇಳೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.

Congress leader Priyanka Gandhi's convoy met with accident
ಅಪಘಾತಕ್ಕೀಡಾದ ಪ್ರಿಯಾಂಕಾ ಗಾಂಧಿ ಬೆಂಗಾವಲು ವಾಹನ

By

Published : Feb 4, 2021, 10:12 AM IST

ರಾಂಪುರ (ಉತ್ತರ ಪ್ರದೇಶ): ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಅವರು ಅಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೀಡಾದ ಪ್ರಿಯಾಂಕಾ ಗಾಂಧಿ ಬೆಂಗಾವಲು ವಾಹನ

ಉತ್ತರ ಪ್ರದೇಶದ ರಾಂಪುರದಲ್ಲಿ ಘಟನೆ ನಡೆದಿದ್ದು, ನಾಲ್ಕು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಅದೃಷ್ಟವಶಾತ್​ ಯಾರೊಬ್ಬರೂ ಗಾಯಗೊಂಡಿಲ್ಲ.

ಜನವರಿ 26ರಂದು ನಡೆದ ಟ್ರ್ಯಾಕ್ಟರ್​ ರ‍್ಯಾಲಿ ವೇಳೆ ಮೃತಪಟ್ಟ ರೈತ ನರ್ವೀತ್​ ಸಿಂಗ್​​​ರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಂಪುರಕ್ಕೆ ಪ್ರಿಯಾಂಕಾ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ABOUT THE AUTHOR

...view details