ಬೆಂಗಳೂರು :ಮಾದಕವಸ್ತು ಸರಬರಾಜು ಪ್ರಕರಣದ ಆರೋಪಿ ಜೊತೆ ಸಂಪರ್ಕ ಹೊಂದಿದ ಆರೋಪದಡಿ ಸಿದ್ದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ನನ್ನು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಅಮಾನತು ಮಾಡಿದ್ದಾರೆ.
ಡ್ರಗ್ಸ್ ಸರಬರಾಜು ಪ್ರಕರಣದಲ್ಲಿ ಇತ್ತೀಚೆಗೆ ಆರೋಪಿಸನಾವುಲ್ಲಾ ಎಂಬಾತನನ್ನು ಬಂಧಿಸಲಾಗಿತ್ತು. ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಸಿದ್ದಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಕಾನ್‌ಸ್ಟೇಬಲ್ ರೆಹಮಾನ್ ಜೊತೆ ಸನಾವುಲ್ಲಾ ಸಂಪರ್ಕ ಹೊಂದಿರುವುದು ಗೊತ್ತಾಗಿತ್ತು.
ಬಳಿಕ ಕಾನ್‌ಸ್ಟೇಬಲ್ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಯೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದು ಗೊತ್ತಾಗಿದೆ. ಈ ಸಂಬಂಧ ಇನ್‌ಸ್ಪೆಕ್ಟರ್ ನೀಡಿದ ವರದಿ ಆಧಾರಿಸಿ ಡಿಸಿಪಿ ಹರೀಶ್ ಪಾಂಡೆ ಕಾನ್‌ಸ್ಟೇಬಲ್‌ನನ್ನು ಸಸ್ಪೆಂಡ್ ಮಾಡಿದ್ದಾರೆ.
ಆರೋಪಿಗಳೊಂದಿಗೆ ಪೊಲೀಸರು ಸಂಪರ್ಕ ಹೊಂದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ಎಚ್ಚರಿಸಿದ್ದರು.
ಇದನ್ನೂ ಓದಿ:ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಲಾಡ್ಜ್ನಲ್ಲಿ ಆತ್ಮಹತ್ಯೆ