ಚಂಡೀಗಢ(ಹರಿಯಾಣ) :ಎಳೆ ಕಂದಮ್ಮಗಳನ್ನೂ ಬಿಡದೆ ಪೈಶಾಚಿಕ ಕೃತ್ಯಗಳನ್ನು ಎಸೆಗುತ್ತಿದ್ದ ಕಾಮುಕರ ಅಟ್ಟಹಾಸ ಮುಂದುವರೆದಿದೆ. ಇದೀಗ ಈ ಕಾಮಾಂಧರು ಮೂಕ ಜೀವಿಗಳನ್ನು ಬಿಡದೆ ಕಾಡುತ್ತಿರುವುದು ಸಮಾಜ ತಲೆ ತಗ್ಗಿಸುವಂತಾಗಿದೆ.
ಹಸುವಿನ ಮೇಲೆ ಯುವಕ ಅತ್ಯಾಚಾರ ಆರೋಪ ; ಕಾಮಾಂಧನನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು - ಹರಿಯಾಣ
ಹಸುವಿನ ಮಾಲೀಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ..
ಹಸುವಿನ ಮೇಲೆ ಯುವಕ ಅತ್ಯಾಚಾರ ಆರೋಪ; ಕಮಾಂಧನನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಇತ್ತೀಚೆಗೆ ಕರ್ನಾಟಕದಲ್ಲಿ ನಾಯಿಯ ಮೇಲೆ ಅತ್ಯಾಚಾರವೆಸಗಿರುವ ಸುದ್ದಿ ಮಾಸುವ ಮುನ್ನವೇ ಹರಿಯಾಣದ ಸೋನಿಪತ್ ಜಿಲ್ಲೆಯ ಲಿವಾಸ್ಪುರ್ ಗ್ರಾಮದಲ್ಲಿ ಯುವಕನೊಬ್ಬ ಹಸುವಿನ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಲಿವಾಸ್ಪುರ್ ಗ್ರಾಮದಲ್ಲಿ ವಾಸವಾಗಿದ್ದ ಉತ್ತರಪ್ರದೇಶದ ಯುವಕ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಸುವಿನ ಮಾಲೀಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.