ಕರ್ನಾಟಕ

karnataka

ETV Bharat / crime

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮುದ್ದೇಬಿಹಾಳದ ಯೋಧ ಸಾವು - Death of a soldier who was injured in a road accident in muddebihal vijayapura district

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಯೋಧ ಬಸವರಾಜ ಸಿದ್ದಪ್ಪ ಡೊಂಗರಗಾವಿ (28) ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಇವರು ಕಳೆದ 2-3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.

Death of a soldier who was injured in a road accident in muddebihal vijayapura district
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮುದ್ದೇಬಿಹಾಳದ ಯೋಧ ಸಾವು

By

Published : Feb 2, 2022, 12:13 PM IST

ಮುದ್ದೇಬಿಹಾಳ(ವಿಜಯಪುರ): ಕಳೆದ 2-3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ಎಫ್‌ ಯೋಧ, ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಸಿದ್ದಪ್ಪ ಡೊಂಗರಗಾವಿ (28) ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿರುವ ಯೋಧ ಬಸವರಾಜ ಸಿದ್ದಪ್ಪ

ಇವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು, ಪ್ರಸ್ತುತ ಬಿಹಾರದಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಮೃತರು ಪತ್ನಿ, ಎರಡು ಗಂಡು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details