ಕರ್ನಾಟಕ

karnataka

ETV Bharat / crime

ತಮಿಳುನಾಡು ಪಟಾಕಿ ಕಾರ್ಖಾನೆ ದುರಂತ: ಮೃತರ ಸಂಖ್ಯೆ 25ಕ್ಕೆ ಏರಿಕೆ - ತಮಿಳುನಾಡಿನ ವಿರುಧುನಗರ್ ಜಿಲ್ಲೆ

ವಿರುಧುನಗರ್ ಪಟಾಕಿ ಕಾರ್ಖಾನೆ ದುರಂತದ ಬಳಿಕ ಜಿಲ್ಲೆಯಲ್ಲಿ ಉತ್ಪಾದನಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ 80 ಪಟಾಕಿ ಕಾರ್ಖಾನೆಗಳನ್ನು ಸೀಲ್​ ಮಾಡಲಾಗಿದೆ.

Tamil Nadu
ವಿರುಧುನಗರ್ ಪಟಾಕಿ ಕಾರ್ಖಾನೆ ದುರಂತ

By

Published : Mar 9, 2021, 9:10 AM IST

ವಿರುಧುನಗರ್: ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ಫೆಬ್ರವರಿ 12 ರಂದು ಸಂಭವಿಸಿದ ಪಟಾಕಿ ಕಾರ್ಖಾನೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿರುಧುನಗರದ ಸತೂರ್​ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗಿತ್ತು. ಘಟನೆ ನಡೆದ ದಿನ 11 ಮಂದಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫೆ.15ರ ವರೆಗೆ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿತ್ತು. ಇದೀಗ ಮತ್ತೆ ಐವರು ಚಿಕಿತ್ಸೆ ಫಲಿಸದೇ ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರದೇಶದಲ್ಲಿ ಭಾರಿ ಸ್ಫೋಟಕ ಪತ್ತೆ!

ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ವಿರುಧುನಗರ್ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 18 ರಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಘಟನೆ ಬಗ್ಗೆ ವರದಿಯನ್ನು ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಂಟು ಸದಸ್ಯರ ಸಮಿತಿ ರಚಿಸಿತ್ತು. ಉತ್ಪಾದನಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈವರೆಗೆ ಜಿಲ್ಲೆಯಲ್ಲಿ 80 ಪಟಾಕಿ ಕಾರ್ಖಾನೆಗಳನ್ನು ಸೀಲ್​ ಮಾಡಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಮೃತರ ಕುಟುಂಬಕ್ಕೆ 3 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪಿಎಂ ನರೇಂದ್ರ ಮೋದಿ ಘೋಷಿಸಿದ್ದಾರೆ.

ABOUT THE AUTHOR

...view details