ಕರ್ನಾಟಕ

karnataka

ETV Bharat / crime

ಭೀಕರ ಅಪಘಾತ: ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು - ಅಪಘಾತ

ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸಿ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮತ್ತು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

Delhi: 'Inebriated' driver rams his car into e-rickshaw, 2 killed
ದೆಹಲಿಯಲ್ಲಿ ಭೀಕರ ಅಪಘಾತ; ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

By

Published : Jun 16, 2021, 3:25 PM IST

ನವದೆಹಲಿ: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೆಹಲಿಯ ದರ್ಯಾಗಂಜ್‌ನಲ್ಲಿ ನಡೆದಿದೆ. ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ರೇಷ್ಮಾ ಮತ್ತು ಶೇಖ್‌ ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ರಾತ್ರಿ ನಡೆದಿರುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಎದೆ ಝಲ್ಲೆನ್ನಿಸುವಂತಿದೆ.

ದೆಹಲಿಯಲ್ಲಿ ಭೀಕರ ಅಪಘಾತ; ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಘಟನೆ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸರು, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎಂದಿದ್ದಾರೆ. ಮೃತ ರೇಷ್ಮಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಇ-ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಮತ್ತು ರೇಷ್ಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಬದಲಾವಣೆ ಬೇಡಿಕೆ ಇರುವುದು ನಿಜ, ಏನು ಬೇಕಾದ್ರೂ ಆಗಬಹುದು: ಈಶ್ವರಪ್ಪ

ಅಪಘಾತದ ಬಳಿಕ ಕಾರು ಚಾಲಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಿಂಬಾಲಿಸಿಕೊಂಡು ಹೋಗಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರು ಚಾಲಾಯಿಸಿದ್ದ ಆರೋಪಿ ದರ್ಶನ್‌ ಲಾಲ್‌ ಮತ್ತು ಸಹ ಪ್ರಯಾಣಿಕ ಬಸಂತ್‌ ಕುಮಾರ್‌ರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ABOUT THE AUTHOR

...view details