ಗಾಜಿಯಾಬಾದ್ (ಉ.ಪ್ರ):ಇಲ್ಲಿನಲೋನಿ ಗಡಿ ಪ್ರದೇಶದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಯುವಕನೊಬ್ಬ ವೃದ್ಧನ ಗಡ್ಡವನ್ನು ಕತ್ತರಿಯಿಂದ ಕತ್ತರಿಸುತ್ತಿರುವುದನ್ನು ಕೂಡಾ ವಿಡಿಯೋದಲ್ಲಿ ಕಾಣಬಹುದಾಗಿದೆ.
ವೃದ್ಧನನ್ನು ಥಳಿಸುತ್ತಿರುವ ಪುಂಡರು.. ವಿಡಿಯೋ ವೈರಲ್! - ವಿಡಿಯೋ ವೈರಲ್
ವಯಸ್ಸಾದ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ, ವೃದ್ಧನ ಗಡ್ಡವನ್ನು ಕತ್ತರಿಯಿಂದ ಕತ್ತರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಹಳೆಯದು ಮತ್ತು ಪ್ರಕರಣದಲ್ಲಿ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ವಿಡಿಯೋ ಹಳೆಯದು ಮತ್ತು ಪ್ರಕರಣದಲ್ಲಿ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಕೆಲವು ಆಟೋ ಚಾಲಕರು ವೃದ್ಧನನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು, ಥಳಿಸಿ ಗಡ್ಡ ಕತ್ತರಿಸಿದ್ದರು ಎಂದು ತಿಳಿದು ಬಂದಿದೆ.
ಇದೀಗ ವಿಡಿಯೋ ವೈರಲ್ ಆಗಿದ್ದು, ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನರು ಇದೀಗ ವಿಡಿಯೋದ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದು, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ, ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.