ಹೈದರಾಬಾದ್: ನಗರದ ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ 7 ಟಾಂಬ್ಸ್ ಬಸ್ ನಿಲ್ದಾಣದ ಬಳಿ 2 ಕೋಟಿ ರೂಪಾಯಿ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೈದರಾಬಾದ್‌ನಲ್ಲಿ 2 ಕೋಟಿ ರೂಪಾಯಿ ನಕಲಿ ನೋಟುಗಳು ವಶ - 2 ಕೋಟಿ ರೂಪಾಯಿ ನಕಲಿ ನೋಟುಗಳು ವಶ
ಎರಡು ಕೋಟಿ ರೂಪಾಯಿ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಹೈದರಾಬಾದ್‌ನ ಗೋಲ್ಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೈದರಾಬಾದ್‌ನಲ್ಲಿ 2 ಕೋಟಿ ರೂಪಾಯಿ ನಕಲಿ ನೋಟುಗಳು ವಶ; ಇಬ್ಬರ ಬಂಧನ
ಇಬ್ಬರು ತಮ್ಮ ಬ್ಯಾಗ್‌ಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಪರಿಶೀಲಿಸಿದಾಗ 500 ಮತ್ತು 2000 ರೂಪಾಯಿ ಮುಖಬೆಲೆಯ ನಕಲಿ ನೋಟು ಪತ್ತೆಯಾಗಿವೆ.
ನಕಲಿ ನೋಟುಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.