ದಾವಣಗೆರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಅಗ್ನಿಯ ಜ್ವಾಲೆಗೆ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದ ಬಳಿಯ ನಂದಿನಿ ಹಾಲಿನ ಡೈರಿ ಬಳಿ ನಡೆದಿದೆ.
ದಾವಣಗೆರೆ: ಗ್ಯಾಸ್ ಸೋರಿಕೆ ಶಂಕೆ, ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು - Fire in running Omni car
ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಕಾರೊಂದು ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದ ಬಳಿ ಸಂಭವಿಸಿದೆ. ಅಗ್ನಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆ: ಗ್ಯಾಸ್ ಸೋರಿಕೆ ಶಂಕೆ; ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಓಮಿನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನದಲ್ಲಿದ್ದವರು ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದ್ದು, ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಬಂದ ಹರಿಹರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಕರಕಲಾದ ಕಾರು ಯಾರಿಗೆ ಸೇರಿದ್ದು ಎಂಬ ಮಾಹಿತಿ ತಿಳಿದು ಬಂದಿಲ್ಲ.
Last Updated : Nov 21, 2021, 7:35 AM IST