ಭದೋಹಿ (ಉತ್ತರ ಪ್ರದೇಶ): ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್, ರಸ್ತೆಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಸಾವನನ್ಪಪ್ಪಿದ್ದಾರೆ.
ರಸ್ತೆಬದಿ ನಿಂತಿದ್ದ ಟ್ರಕ್ಗೆ ಆ್ಯಂಬುಲೆನ್ಸ್ ಡಿಕ್ಕಿ: ಸ್ಥಳದಲ್ಲೇ ಐವರ ದುರ್ಮರಣ - ಉತ್ತರ ಪ್ರದೇಶದ ಭದೋಹಿಯಲ್ಲಿ ಭೀಕರ ರಸ್ತೆ ಅಪಘಾತ
ರಸ್ತೆಬದಿ ನಿಂತಿದ್ದ ಟ್ರಕ್ಗೆ ಮೃತದೇಹವನ್ನು ತೆಗೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ಮೃತನ ಸಹೋದರ, ಆ್ಯಂಬುಲೆನ್ಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ.
ರಸ್ತೆಬದಿ ನಿಂತಿದ್ದ ಟ್ರಕ್ಗೆ ಆಂಬ್ಯುಲೆನ್ಸ್ ಡಿಕ್ಕಿ
ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಅಸನ್ಸೋಲ್‌ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಪಿನ್ ಪಾಲ್ ಸಿಂಗ್ ಎಂಬವರು ಮೃತಪಟ್ಟಿದ್ದರು. ಮೃತದೇಹವನ್ನು ಅವರ ಸಹೋದರ ಹಾಗೂ ಇನ್ನಿಬ್ಬರು ಚಿತ್ತೋರ್ಗಡ್ಗೆ ಕರೆದೊಯ್ಯುತ್ತಿದ್ದರು. ಆದರೆ ಈ ವೇಳೆ ದುರ್ಘಟನೆ ನಡೆದಿದೆ.
ಮೃತನ ಸಹೋದರ ನವನೀತ್, ರಾಜ್ವೀರ್, ರಾಕೇಶ್, ಆಂಬ್ಯುಲೆನ್ಸ್ ಚಾಲಕ ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ವಾಹನಗಳನ್ನು ತೆರವುಗೊಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.