ರಾಜ್‌ಗಢ (ಮಧ್ಯಪ್ರದೇಶ):ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ನಡೆದಿದೆ.
ಮಹಾರಾಷ್ಟ್ರ ನಾಸಿಕ್‌ಗೆ ಹೋಗುತ್ತಿದ್ದ ಟವೆರಾ ಕಾರು ರಾಷ್ಟ್ರೀಯ ಹೆದ್ದಾರಿ - 3ರಲ್ಲಿ ಅತಿವೇಗದಲ್ಲಿ ಬಂದು ಹಿಂದಿನಿಂದ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಾರಂಗ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.